ಮೇ.06 ರಂದು (ನಾಳೆ) ಅರಣ್ಯ ಸಚಿವರ ಕೊಡಗು ಜಿಲ್ಲಾ ಪ್ರವಾಸ
admincoorgdaily

ಮಡಿಕೇರಿ ಮೇ.05:-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮೇ, 06 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಮೇ, 06 ರಂದು ಮಧ್ಯಾಹ್ನ 12 ಗಂಟೆಗೆ ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ತಿಳಿಸಿದ್ದಾರೆ.