ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಬೆಂಗಳೂರು: ತಿಪಟೂರು ಕ್ಷೇತ್ರದ ಮಾಜಿ ಶಾಸಕರು ಮತ್ತು ರಾಜ್ಯದ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ (65) ಅವರು ಮಂಗಳವಾರ ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.
ಬಿ.ಸಿ. ನಾಗೇಶ್ ಅವರು ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಾಳೆ ಅಂದರೆ ಆಗಸ್ಟ್ 19 ರಂದು ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಂತರ ಅಂತ್ಯಸಂಸ್ಕಾರವು ಅವರ ತವರು ಕ್ಷೇತ್ರವಾದ ತಿಪಟೂರಿನಲ್ಲಿ ನೆರವೇರಲಿದೆ. ಬಿ.ಸಿ. ನಾಗೇಶ್ ಅವರು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
