ಕೇರಳ ಮಾಜಿ ಸಿ.ಎಂ ಅಚ್ಚುತಾನಂದನ್ ನಿಧನ

Jul 21, 2025 - 16:46
 0  143
ಕೇರಳ ಮಾಜಿ ಸಿ.ಎಂ ಅಚ್ಚುತಾನಂದನ್ ನಿಧನ
Photo:Mathrbhumi

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ ಅವರು ಸೋಮವಾರ ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶತಾಯುಷಿಯಾದ ಅಚ್ಯುತಾನಂದನ್ (101), ಕೇರಳ ರಾಜಕಾರಣದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿಯಾಗಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಚ್ಯುತಾನಂದನ್, 2006ರಿಂದ 2011ರ 011ರವರೆಗೆ ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0