Kodagu

ಕಾಂಗ್ರೆಸ್ ವಾರ್ ರೂಂ ನಲ್ಲಿ ಎನ್ಯುಮರೇಶನ್ ಫಾರಂ ಭರ್ತಿ ಮಾಡಿದ ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ

admincoorgdaily

ಕಾಂಗ್ರೆಸ್ ವಾರ್ ರೂಂ ನಲ್ಲಿ ಎನ್ಯುಮರೇಶನ್ ಫಾರಂ ಭರ್ತಿ ಮಾಡಿದ ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ

ಮಡಿಕೇರಿ: ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ನವರು ಕೊಡಗು ಜಿಲ್ಲಾ ಕಾಂಗ್ರೆಸ್ ವಾರ್ ರೂಮ್ ನಲ್ಲಿ ತಮ್ಮ ಎನ್ಯುಮರೇಶನ್ ಫಾರಂ ಭರ್ತಿ ಮಾಡುವ ಮೂಲಕ ಎಸ್.ಐ.ಆರ್ ಪ್ರಕೃಯೆ ಯಲ್ಲಿ ಭಾಗಿಯಾದರು.

ಜಿಲ್ಲಾ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾದ ತೆನ್ನಿರ ಮೈನಾ ರವರು ವೀಣಾ ಅಚ್ಚಯ್ಯ ಹಾಗೂ ಅವರ ಕುಟುಂಬದ ಸದಸ್ಯರ ಮತದಾರರ ವಿವರಗಳನ್ನು ಭರ್ತಿ ಮಾಡಿದರು.

 ಎನ್ಯುಮರೇಶನ್ ಫಾರಂ ಅನ್ನು ಪ್ರತಿಯೊಬ್ಬ ಮತದಾರರು ಭರ್ತಿ ಮಾಡಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯವಾಗಿದ್ದು ಪ್ರತಿಯೊಬ್ಬರು ಎಚ್ಚರಿಕೆಯಿಂದ ಫಾರಂ ಭರ್ತಿಮಾಡಬೇಕು.

ಮತದಾರರಿಗೆ ಸಹಕಾರ ನೀಡಲು ಜಿಲ್ಲೆಯ ಎಲ್ಲಾ ತಾಲ್ಲೂಕು ಗಳಲ್ಲಿ ಕಾಂಗ್ರೆಸ್ ವಾರ್ ರೂಂ ಮತ್ತು ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಿಗೆ ವೀಣಾ ಅಚ್ಚಯ್ಯನವರು ಮನವಿ ಮಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.