State News

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಜಾಮೀನು ಅರ್ಜಿ ಏನಾಯಿತು ಗೊತ್ತೇ!

admincoorgdaily

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಹೊಳೆನರಸೀಪುರ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಳೆದ 14 ತಿಂಗಳಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪು ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯ ನ್ಯಾಯಾಲಯದ ನ್ಯಾ‌‌.ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.