State News

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

admincoorgdaily

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ (HD Devegowda) ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. 1954ರ ಮೇ 25ರಲ್ಲಿ H.D.ದೇವೇಗೌಡರ ಜೊತೆಗೆ ವಿವಾಹವಾಗಿದ್ದ ಚೆನ್ನಮ್ಮ ಉಸಿರಾಟದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.