Kodagu

ಮಡಿಕೇರಿ ನಗರಸಭೆ ಮಾಜಿ ಉಪಾಧ್ಯಕ್ಷ ಲಿಯಾಕತ್ ಅಲಿ ನಿಧನ

admincoorgdaily

ಮಡಿಕೇರಿ ನಗರಸಭೆ ಮಾಜಿ ಉಪಾಧ್ಯಕ್ಷ ಲಿಯಾಕತ್ ಅಲಿ ನಿಧನ

ಮಡಿಕೇರಿ: ನಗರ ಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಕೊಡಗಿನ ಹಿರಿಯ ಕಲಾವಿದರಾದ ಲಿಯಾಕತ್ ಅಲಿ (69) ಅವರು ಕೆಲವು ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

 ಲಿಯಾಕತ್ ಅಲಿ ಅವರು ಉತ್ತಮ ಗಾಯಕನಾಗಿದ್ದು, ಕೊಡಗಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು. ಹಲವು ವರ್ಷಗಳ ಹಿಂದೆ ನಡೆದ ಗೋಕಾಕ್ ಚಳುವಳಿ ಸೇರಿದಂತೆ ಕನ್ನಡ ಪರ ಚಳುವಳಿಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸಿ ಕನ್ನಡದ ಪರ ಧ್ವನಿ ಎತ್ತುತ್ತಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಮಡಿಕೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.