ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಕೊಡಗು ಬಂಟರ ಭವನಕ್ಕೆ ಮೇ 01ರಂದು ಶಂಕುಸ್ಥಾಪನೆ

Apr 28, 2026 - 17:08
 0  194
ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಕೊಡಗು ಬಂಟರ ಭವನಕ್ಕೆ ಮೇ 01ರಂದು ಶಂಕುಸ್ಥಾಪನೆ

ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಕೊಡಗು ಬಂಟರ ಭವನಕ್ಕೆ ಮೇ ೧ರ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ.

 ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್ ಕ್ಯಾ.ಬ್ರಿಜೇಶ್ ಚೌಟ, ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕ್ರೀಡಾಕೂಟ: ಏ.೩೦ ರಿಂದ ಮೇ ೩ರವರೆಗೆ ಕೊಡಗು ಯುವ ಬಂಟ್ಸ್ ವತಿಯಿಂದ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಹಗ್ಗ ಜಗ್ಗಾಟ ಸೇರಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಸುದ್ದಿಗೋಷ್ಠಿಯಲ್ಲಿ ಬಿ.ಬಿ.ಐತಪ್ಪ ರೈ, ರವೀಂದ್ರ.ವಿ.ರೈ, ಅಪ್ಪು ಬಾಲಕೃಷ್ಣ ರೈ, ಬಿ.ಎಸ್.ಸದಾಶಿವ ರೈ, ಬಿ.ಕೆ.ಸದಾನಂದ ರೈ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0