ವಿರಾಜಪೇಟೆ ಗಾಂಜಾ,ಮಾರಾಟಕ್ಕೆ ಯತ್ನ ನಾಲ್ವರ ಬಂಧನ
ವಿರಾಜಪೇಟೆ;ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ ಸಮೀಪ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಿ: 07-04-2026 ರಂದು ದಾಳಿ ನಡೆಸಿ4 ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಸದರಿ ಆರೋಪಿಗಳ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 20(b) NDPS Act ಅಡಿಯಲ್ಲಿ ಪ್ರಕರಣ ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಆರೋಪಿಗಳ ವಿವರ, 1. ಹರ್ಷದ್ ಖಾನ್, 25 ವರ್ಷ, ಶಾಂತಿ ನಗರ, ಮೈಸೂರು 2. ಮುಜಾಮಿಲ್ ಅಹಮ್ಮದ್, 46 ವರ್ಷ, ಅಜೀತ್ ಸೇಟ್ ನಗರ, ಬಿಡಿ ಕಾಲೋನಿ, ಮೈಸೂರು. 3. ಅಪ್ಪಲ್ ಪಾಷ, 28 ವರ್ಷ, ಅಜೀತ್ ಸೇಟ್ ನಗರ, ಬಿಡಿ ಕಾಲೋನಿ, ಮೈಸೂರು. 4. ಸಾಕ್ಯೂಬ್, 32 ವರ್ಷ, ಕಲ್ಯಾಣ ಗಿರಿ, ಮೈಸೂರು. ವಶಪಡಿಸಿಕೊಂಡ ಸ್ವತ್ತುಗಳ ವಿವರ: 1. 576 ಗ್ರಾಂ ಗಾಂಜಾ 2. ಕಾರು
ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕು। ಬಂದು ಮಣಿ.ಆರ್.ಎನ್. ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.
ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಆಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.