ಶತಮಾನ ಪೂರೈಸಿದ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ತೊರೆನೂರು ಗ್ರಾಮಸ್ಥರ ಪ್ರತಿಭಟನೆ

Mar 28, 2026 - 12:58
 0  183
ಶತಮಾನ ಪೂರೈಸಿದ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ತೊರೆನೂರು ಗ್ರಾಮಸ್ಥರ ಪ್ರತಿಭಟನೆ

ಕುಶಾಲನಗರ;106 ವರ್ಷ ಪೂರೈಸಿರುವ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಶಿರಂಗಾಲ ಶಾಲೆಗೆ ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಸ್ವಾತಿ ಅವರು ಮಾತನಾಡಿ ' ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6 ಸಾವಿರ ಕೆಪಿಎಸ್ ಶಾಲೆ ತೆರೆಯುವ ಗುರಿಯನ್ನು ಸರ್ಕಾರ ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳೆಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಆಯ್ದುಕೊಂಡು, 235 ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಟ್ಟಿ ಮಾಡಲಾಗಿದೆ.

 ಶಿರಂಗಾಲ ಶಾಲೆಗೆ ತೊರೆನೂರು ಶಾಲೆಯನ್ನು ವಿಲೀನಗೊಳಿಸಲು ಆದೇಶಿಸಲಾಗಿದೆ. ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ. ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುತ್ತಿಲ್ಲ ಎಂದು ಬೊಬ್ಬಿರಿಯುವ ಸರಕಾರ, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ.

ಮೊದಲು ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಗ್ರಾಮೀಣ ಕನ್ನಡ ಶಾಲೆಗಳನ್ನು ಮುಚ್ಚಬಾರದು'' ಎಂದು ಆಗ್ರಹಿಸಿದರು. ಸರಕಾರಿ ಶಾಲೆಗಳನ್ನು ಮುಚ್ಚುವ ಮುಖಾಂತರ ಸರಕಾರ ಬಡ ಕೂಲಿ ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ದೂರ ಮಾಡಲು ಮುಂದಾಗಿದೆ. ಸಾರ್ವಜನಿಕ ಶಿಕ್ಷಣವನ್ನು ಸಂಪೂರ್ಣ ಖಾಸಗೀಕರಣ ಮಾಡಲು ಹೊರಟಿದೆ' ಎಂದರು.

ಊರಿನ ಶಾಲೆಯನ್ನು ಉಳಿಸಬೇಕು ಎಂಬ ಹಂಬಲದಿಂದ ಹಿರಿಯರು, ಹಳೆಯ ವಿದ್ಯಾರ್ಥಿಗಳು, ಯುವಕರು ಒಳಗೊಂಡಂತೆ 70ಕ್ಕೂ ಹೆಚ್ಚು ಗ್ರಾಮಸ್ಥರು ಶಾಲೆ ಬಳಿ ನೆರೆದು. ಒಕ್ಕೊರಲಿನಿಂದ ನಮ್ಮೂರಿನ ಸರ್ಕಾರಿ ಶಾಲೆಯನ್ನು ಯಾವುದೇ ಕಾರಣಕ್ಕೂ ಹುಚ್ಚಲು ಬಿಡುವುದಿಲ್ಲ, ಶಾಲೆ ಉಳಿಸಿಕೊಳ್ಳಲು ಯಾವ ಹಂತದ ಹೋರಾಟಕ್ಕಾದರೂ ನಾವು ಸಿದ್ಧ ಎಂದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಶಾಲೆಯ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0