ಮೊಬೈಲ್ ಟೆಕ್ನೀಶನ್ ಆಗುವ ಆಸೆ ಇದೆಯೇ! ಉಚಿತ ತರಬೇತಿ ಶಿಬಿರದಲ್ಲಿ ಭಾಗವಹಿಸಿ

Jul 24, 2025 - 23:23
Jul 24, 2025 - 23:25
 0  121
ಮೊಬೈಲ್ ಟೆಕ್ನೀಶನ್ ಆಗುವ ಆಸೆ ಇದೆಯೇ! ಉಚಿತ ತರಬೇತಿ ಶಿಬಿರದಲ್ಲಿ ಭಾಗವಹಿಸಿ

ಮಡಿಕೇರಿ:ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್, 05 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ರಿಪೇರಿ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್, 05 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 9505894247, 8970476050, 9591514154, 9686248369, 8970446644 ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0