ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

Jun 2, 2026 - 11:21
 0  358
ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಸಿದ್ದಾಪುರ :- ಕುಶಾಲನಗರದ ಐನ್ ಆಪ್ಟಿಕಲ್ಸ್ & ಆಪ್ಟೋಮೆಟ್ರಿ ಕ್ಲಿನಿಕ್ ವತಿಯಿಂದ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು.

 ಶಿಬಿರದಲ್ಲಿ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ನಡೆಸಿ, ಕಣ್ಣಿನ ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು. ದೃಷ್ಟಿದೋಷ ಸೇರಿದಂತೆ ವಿವಿಧ ನೇತ್ರ ಸಮಸ್ಯೆಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಯಿತು.

ಕಾರ್ಯಕ್ರಮವನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರಾಣಿ ಉದ್ಘಾಟಿಸಿದರು.ಮಾಜಿ ಪಂಚಾಯಿತಿ ಸದಸ್ಯ ಇಸ್ಮಾಯಿಲ್, ಅರಣ್ಯ ಇಲಾಖೆಯ ಸಿಬ್ಬಂದಿ ಶಶಿ, ಪಿ.ಎಚ್.ಸಿ.ಒ. ಸುಧಾ ಟಿ.ಬಿ., ಚಿತ್ರ ಕಲಾವಿದ ಭಾವ, ಆಶಾ ಕಾರ್ಯಕರ್ತೆ ಹೇಮಾವತಿ, ಎಂ.ಬಿ.ಕೆ. ರೋಹಿಣಿ, ಎಲ್.ಸಿ.ಆರ್.ಪಿ. ಪುಷ್ಪ, ಪಶು ಸಖಿ ದಿವ್ಯ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಕಣ್ಣಿನ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದ್ದು, ಇಂತಹ ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಅಭಿಪ್ರಾಯಪಟ್ಟರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿ ಉಚಿತ ನೇತ್ರ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಸಂಜೀವಿನಿ ಒಕ್ಕೂಟ ಹಾಗೂ ಐನ್ ಆಪ್ಟಿಕಲ್ಸ್ ಸಿಬ್ಬಂದಿ ಸಹಯೋಗದೊಂದಿಗೆ ಯಶಸ್ವಿಯಾಗಿ ಆಯೋಜಿಸಲಾಯಿತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0