ಪೊನ್ನಪ್ಪಸಂತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿರಾಜಪೇಟೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದಡಿ, ಮಾಯಮುಡಿ ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬೃಹತ್ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತುಗ್ರಾಮ ಪಂಚಾಯಿತಿ ಸದಸ್ಯರಾದ ನಾಚಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಆರೋಗ್ಯದ ಬಗ್ಗೆ ಜಾಗೃತಿ: ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ರತ್ನಮ್ಮ ಮಾತನಾಡಿ, "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.
ಇಂದು ಹಮ್ಮಿಕೊಂಡಿರುವ ಕಣ್ಣಿನ ತಪಾಸಣಾ ಶಿಬಿರವು ಅತ್ಯಂತ ಶ್ಲಾಘನೀಯ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಶೀನಾ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲೇ ಇಂತಹ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವುದರಿಂದ ಸ್ಥಳೀಯ ಜನರಿಗೆ ಹಾಗೂ ಗ್ರಾಹಕರಿಗೆ ತುಂಬಾ ಅನುಕೂಲವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.
ಕಣ್ಣಿನ ಸಂರಕ್ಷಣೆ ಕುರಿತು ಮಾಹಿತಿ: ಮೈಸೂರಿನ ಐ ಹಾಸ್ಪಿಟಲ್‌ನ ಸೀನಿಯರ್ ಮಾರ್ಕೆಟಿಂಗ್ ಮ್ಯಾನೇಜರ್ ಆದ ಪಾಷಾ ಅವರು ಮಾತನಾಡಿ, ಕಣ್ಣುಗಳನ್ನು ಸಂರಕ್ಷಿಸುವ ವಿಧಾನ, ಎದುರಾಗುವ ಸಮಸ್ಯೆಗಳು ಹಾಗೂ ಅದಕ್ಕೆ ಪೂರಕವಾದ ಆಹಾರ ಪದ್ಧತಿಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಇದೇ ವೇಳೆ ಅವರು ಸಂಸ್ಥೆಯ 'ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ' ಸೌಲಭ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಿದರು.
150ಕ್ಕೂ ಹೆಚ್ಚು ಜನರಿಗೆ ಉಚಿತ ತಪಾಸಣೆ: ಶಿಬಿರದಲ್ಲಿ ಮೈಸೂರಿನ ವೀನಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್, ಡಾಕ್ಟರ್ ಶ್ವೇತಾ ಮತ್ತು ಬಸವರಾಜು ಅವರ ನೇತೃತ್ವದಲ್ಲಿ ಉಚಿತ ಜನರಲ್ ಚೆಕ್-ಅಪ್, ಬಿ.ಪಿ ಹಾಗೂ ಶುಗರ್ ಟೆಸ್ಟ್ ಮಾಡಲಾಯಿತು.
ಶಿಬಿರದ ಪ್ರಯೋಜನವನ್ನು ಸುಮಾರು 150ಕ್ಕೂ ಹೆಚ್ಚು ಜನ ಪಡೆದುಕೊಂಡಿದ್ದು, ಈ ಪೈಕಿ 98 ಮಂದಿಗೆ ಕನ್ನಡಕಗಳನ್ನು ವಿತರಿಸಲಾಯಿತು. ಕಣ್ಣಿನ ಪೊರೆ (ಅಚಿಣಚಿಡಿಚಿಛಿಣ) ಸಮಸ್ಯೆ ಇರುವ ಸದಸ್ಯರಿಗೆ 'ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ' ಹಾಗೂ 'ಆಯುಷ್ಮಾನ್ ಭಾರತ' ಯೋಜನೆಯಡಿ ಸಿಗುವ ಉಚಿತ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಲಯದ ಕೃಷಿ ಮೇಲ್ವಿಚಾರಕರಾದ ವಸಂತ್, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿ ಬಿಂದು, ಪುಷ್ಪಾ ಹಾಗೂ ತಮನ್ನಾ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
