ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ

Jun 20, 2026 - 17:31
 0  101
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ

ಮಡಿಕೇರಿ ಜೂ.20:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರವು ನಗರಸಭೆಯಲ್ಲಿ ಶುಕ್ರವಾರ ನಡೆಯಿತು.  

ಶಿಬಿರದಲ್ಲಿ ಭಾಗವಹಿಸಿದ ಪೌರ ಕಾರ್ಮಿಕರಿಗೆ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಬಾಯಿ ಆರೋಗ್ಯ, ದಂತ ಆರೋಗ್ಯ, ತಂಬಾಕು ವ್ಯಸನದ ಚಿಕಿತ್ಸೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ತಪಾಸಣೆ ನಡೆಸಲಾಯಿತು. 

ಈ ಶಿಬಿರದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಡಾ.ನಚಿಕೇತ್ ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ಜಿಷ್ಣು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಾಕ್ಷ, ಹಿರಿಯ ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಾಥ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರೇಮ್ ಕುಮಾರ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರಾದ ಆರ್.ಮಂಜುನಾಥ್ ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0