ನಾಳೆ ಹುದಿಕೇರಿಯಲ್ಲಿ ಉಚಿತ ಆರೋಗ್ಯ ಶಿಬಿರ

Jul 8, 2025 - 18:48
Jul 8, 2025 - 18:50
 0  30
ನಾಳೆ ಹುದಿಕೇರಿಯಲ್ಲಿ ಉಚಿತ ಆರೋಗ್ಯ ಶಿಬಿರ

ಗೋಣಿಕೊಪ್ಪ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣನವರ 51ನೇ ಹುಟ್ಟು ಹಬ್ಬದ ಅಂಗವಾಗಿ ಹುದಿಕೇರಿಯ ಕೊಡವ ಸಮಾಜದಲ್ಲಿ ನಾಳೆ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಉಚಿತ ಆರೋಗ್ಯ ಶಿಬಿರ ಮತ್ತು ತಪಾಸಣೆ ನಡೆಯಲಿದೆ. ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ.

ಶಾಸಕ ಎ.ಎಸ್‌.ಪೊನ್ನಣ್ಣನವರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದು,ಈ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ಬ್ಲಾಕ್ ವ್ಯಾಪ್ತಿಯ ಎಲ್ಲಾ ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು ಹಾಗೂ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು, ಎಲ್ಲಾ ಬೂತ್ ಕಮಿಟಿ ಅಧ್ಯಕ್ಷರುಗಳು/ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕಾಗಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0