ಡಿ.17ರಂದು ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೆದಮುಳ್ಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಡಿ.17ರಂದು ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೆದಮುಳ್ಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಆರ್.ಐ.ಹೆಚ್.ಪಿ ಆಸ್ಪತ್ರೆ ಅಮ್ಮತ್ತಿ ಹಾಗೂ ಪಾತಿಮಾ ಮಾತೇಯ ದೇವಾಲಯ ಕೆದಮುಳ್ಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.17 ರಂದು ಕೆದಮುಳ್ಳೂರುವಿನಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಕಿಶೋರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

 ಈ ಬಗ್ಗೆ ಪತ್ರಿಕ ಆಹೇಳಿಕೆ ನೀಡಿರುವ ಅವರು, ಕೆದಮುಳ್ಳೂರು ಗ್ರಾಮದ ಸೆಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಚಿತ್ಸೆಯನ್ನು ಏರ್ಪಡಿಸಲಾಗಿದೆ. ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆಯ ನುರಿತ ವೈದ್ಯರು ಆರೋಗ್ಯ ಹಾಗೂ ನೇತ್ರ ಚಿಕಿತ್ಸೆಯನ್ನು ಒದಗಿಸಲಿದ್ದಾರೆ. ಡಿ.17 ರ ಬೆಳಗ್ಗೆ 10 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.