ಜು. 29ರಂದು ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಉಚಿತ ಆಧ್ಯಾತ್ಮಿಕ ಶಿಬಿರ
ಪೊನ್ನಂಪೇಟೆ, ಜು. 28: ಶ್ರೀ ರಾಮಕೃಷ್ಣ ಶಾರದಾಶ್ರಮ, ಪೊನ್ನಂಪೇಟೆಯಲ್ಲಿ ಜುಲೈ 29ರಂದು (ಬುಧವಾರ) ಗುರುಪೂರ್ಣಿಮೆಯ ಅಂಗವಾಗಿ ಉಚಿತ ಪೂರ್ಣಿಮಾ ಆಧ್ಯಾತ್ಮಿಕ ಶಿಬಿರವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರಿಗೆ ಉಚಿತವಾಗಿ ಮುಕ್ತವಾಗಿರುವ ಈ ಶಿಬಿರದಲ್ಲಿ ಆಧ್ಯಾತ್ಮಿಕ ಪ್ರವಚನಗಳು, ಭಜನೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ, ಧ್ಯಾನ ಸೇರಿದಂತೆ ವಿವಿಧ ಆಧ್ಯಾತ್ಮಿಕ ಚಟುವಟಿಕೆಗಳು ನಡೆಯಲಿವೆ. ಮಧ್ಯಾಹ್ನ ಭಾಗವಹಿಸುವ ಎಲ್ಲ ಭಕ್ತಾದಿಗಳಿಗೆ ಉಚಿತ ಪ್ರಸಾದ ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ.
ಅದೇ ದಿನ ಬೆಂಗಳೂರಿನ "ರಂಗಪುಟ್ಟಳಿ" ಕಲಾವಿದರಿಂದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶವನ್ನು ಬಿಂಬಿಸುವ ವಿಶೇಷ "ಗೊಂಬೆ ಪ್ರದರ್ಶನ" (Doll Show) ಸಹ ಏರ್ಪಡಿಸಲಾಗಿದೆ. ಆಸಕ್ತ ಭಕ್ತಾದಿಗಳು ತಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಪರಹಿತಾನಂದ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ .
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
