ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಣೆ
ಸೋಮವಾರಪೇಟೆ: ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಮಾಜಿ ಸೈನಿಕರಾದ ಶ್ರೀಯುತ ಗಣೇಶ್ ಅವರು ಉಚಿತವಾಗಿ ಟ್ರ್ಯಾಕ್ ಸೂಟ್ ವಿತರಿಸಿದರು.
ಟ್ರ್ಯಾಕ್ ಸೂಟ್ ವಿತರಣೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಸ್ಕಾರಯುತ ಹಾಗೂ ಮೌಲ್ಯಯುತ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು. ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ನಿಮ್ಮ ಹೆಗಲ ಮೇಲೆಯೇ ಇದೆ. ಎಲ್ಲರೂ ತಾವು ಕಲಿತ ಶಾಲೆಗೆ ಹಾಗೂ ತಮ್ಮ ಗ್ರಾಮಕ್ಕೆ ಹೆಸರು ತಂದುಕೊಡುವ ಕಾರ್ಯವನ್ನು ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರವಿಕುಮಾರ್ ಕೆ.ಎನ್ ಅವರು ವಿದ್ಯಾರ್ಥಿಗಳಿಗೆ ಗುರುತಿನ ಪತ್ರವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವದಾಸು, ಕೆ.ಎನ್. ಪಾಪಯ್ಯ, ಕಾರ್ಯದರ್ಶಿ ವಿನಯ್ ಸಂಭ್ರಮ್, ಖಜಾಂಚಿ ತಿಮ್ಮಯ್ಯ, ನಿರ್ದೇಶಕರಾದ ಅಶ್ವತ್ ಸಿ.ಸಿ, ಕಿರಣ್, ಶ್ರೀಮತಿ ಪುಷ್ಪಾ, ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ, ಅಲ್ಫೋನ್ಸೋ ಲೋಬೊ, ಕುಮಾರ್, ಸೀನ, ಯಶೋದ, ಲತಾ, ಸೀಮಾ ಲೂಯಿಸ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ ಎಚ್.ಎಸ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ರತ್ನಕುಮಾರ ಕೆ.ಆರ್ ಹಾಗೂ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
