ಗಾಂಧಿ ಗ್ರಾಮ ‌ಪ್ರಶಸ್ತಿ:ಅಭಿನಂದಿಸಿದ ಶಾಸಕ ಎಎಸ್ ಪೊನ್ನಣ್ಣ

ಗಾಂಧಿ ಗ್ರಾಮ ‌ಪ್ರಶಸ್ತಿ:ಅಭಿನಂದಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಗ್ರಾಮ ಪಂಚಾಯಿತಿಗೆ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಈ ಬಾರಿ ವಿರಾಜಪೇಟೆ ಕ್ಷೇತ್ರದ ಮಾಯಮುಡಿ ಪಂಚಾಯತ್ ಹಾಗೂ ಮಡಿಕೇರಿ ಕ್ಷೇತ್ರದ ಹೊದ್ದೂರು ಪಂಚಾಯತ್ ಪಡೆದುಕೊಂಡಿದೆ.

ವಿಧಾನಸೌಧದ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ ರವರು ಪ್ರಶಸ್ತಿ ವಿತರಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಯಮುಡಿ ಪಂಚಾಯತ್ ಅಧ್ಯಕ್ಷರಾದ ಟಾಟು ಮೊಣ್ಣಪ್ಪ ಹಾಗೂ ಹೊದ್ದೂರು ಪಂಚಾಯತ್ ಅಧ್ಯಕ್ಷರಾದ ಹಂಸ ರವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗ್ಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು ಭೇಟಿಯಾದರು. ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಮಾನ್ಯ ಶಾಸಕರು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ, ಜಗಮನ್ನಣೆಗಳಿಸುವಂತೆ ಶುಭ ಹಾರೈಸಿದರು.