Kodagu

ಶ್ರೀ ಬಲಮುರಿ ಮಹಾಗಣಪತಿ ದೇವಾಲಯದಲ್ಲಿ ಗಣೇಶೋತ್ಸವ

admincoorgdaily

ಕಡಂಗ:ಅರಪಟ್ಟು -ಕಡಂಗ ಪಟ್ಟಣದ ಶ್ರೀ ಬಲಮುರಿ ಮಹಾಗಣಪತಿ ದೇವಸ್ಥಾನದಲ್ಲಿ 34ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಆಗಸ್ಟ್ 27 ರಂದು ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡು ಸೆಪ್ಟೆಂಬರ್ 2 ರವರೆಗೆ ವಿವಿಧ ಪೂಜೆಗಳಿಂದ ಗೌರಿ ಗಣೇಶೋತ್ಸವವನ್ನು ಆಚರಿಸಲಾಯಿತು. ಮಂಗಳವಾರ ವಿಸರ್ಜನಾ ಮೂರ್ತಿಯನ್ನು ಪೋದ್ದಮಾನಿಯ ಕಾಂಡಕೆರೆಯಲ್ಲಿ ವಿಸರ್ಜಿಸಲಾಯಿತು.ಈ ಸಂದರ್ಭದಲ್ಲಿ ಊರಿನ ಪ್ರಮುಖರು, ಭಕ್ತಾದಿಗಳು ಜನರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು ಮತ್ತು ಸಮಿತಿ ವತಿಯಿಂದ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಮೆರವಣಿಗೆ ಮೂಲಕ ಮೂರ್ತಿಯನ್ನು ವಿಸರ್ಜಿಸಲಾಯಿತು.