ಏಳನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

Dec 2, 2025 - 16:52
 0  1.7k
ಏಳನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು
Photo credit: INDIA TODAY

ಬೆಳಗಾವಿ: ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಈ ಸಂಬಂಧ ಮಣಿಕಂಠ ದಿನ್ನಿಮಣಿ (28) ಹಾಗೂ ಈರಣ್ಣ ಸಂಕಮ್ಮನವರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸರ ಪ್ರಕಾರ, ಮನೆಯದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ತೆರಳಿದ್ದ ಬಾಲಕಿಯನ್ನು ಆರೋಪಿಗಳು ಅಡ್ಡಗಟ್ಟಿದ ನಂತರ ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಅಮಾನವೀಯ ಕೃತ್ಯ ಎಸಗಿದ್ದಾರೆ. ಘಟನೆ ನವೆಂಬರ್ 23ರಂದು ನಡೆದಿದ್ದರೂ, ಜೀವಬೆದರಿಕೆ ಹಾಕಿದ್ದ ಪರಿಣಾಮ ಕುಟುಂಬದವರು ದೂರು ನೀಡಲು ಹಿಂಜರಿದಿದ್ದರು ಎನ್ನಲಾಗಿದೆ.

ಆದರೆ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಿನ್ನೆ (ಡಿಸೆಂಬರ್ 1) ಬಾಲಕಿಯ ಕುಟುಂಬ ಪೊಲೀಸರನ್ನು ಸಂಪರ್ಕಿಸಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ಬಳಿಕ ಆರೋಪಿ ಇಬ್ಬರೂ ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 3
Sad Sad 7
Wow Wow 1