Kodagu

ಕಾವೇರಿ ನದಿಗೆ ಕಸ: ವೈರಲ್ ವಿಡಿಯೋ ಬೆನ್ನಲ್ಲೇ ಪ್ರಕರಣ ದಾಖಲು

admincoorgdaily

ಕಾವೇರಿ ನದಿಗೆ ಕಸ: ವೈರಲ್ ವಿಡಿಯೋ ಬೆನ್ನಲ್ಲೇ ಪ್ರಕರಣ ದಾಖಲು

ಮಡಿಕೇರಿ:ಕಾವೇರಿ ನದಿಗೆ ಕಸ ಎಸೆಯುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಐಕೊಳ ಗ್ರಾಮದ ಸೇತುವೆ ಮೇಲಿಂದ ಅಪರಿಚಿತ ವ್ಯಕ್ತಿಯೊಬ್ಬ ಕಾರಿನಲ್ಲಿ ಬಂದು ಕಸವನ್ನು ನದಿಗೆ ಎಸೆಯುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಗಮನಕ್ಕೆ ಬರುತ್ತಿದ್ದಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ಸಂ 121/2026, ಕಲಂ 271, 279 ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.