State News

ಮೈಸೂರು ಅರಮನೆ ಮುಂಭಾಗ ಗ್ಯಾಸ್ ಬಲೂನ್ ಸಿಲಿಂಡರ್ ಸ್ಪೋಟ: ಒಬ್ಬರು ಮೃತ್ಯು

admincoorgdaily

Photo credit:VK

ಮೈಸೂರು, ಡಿ.25: ಮೈಸೂರು ಅರಮನೆ ಮುಂಭಾಗದ ಜಯಮಾರ್ತಾಂಡ ಗೇಟ್ ಬಳಿ ಗ್ಯಾಸ್ ಬಲೂನ್‌ಗೆ ಗ್ಯಾಸ್ ತುಂಬುತ್ತಿದ್ದ ವೇಳೆ ನೈಟ್ರೋಜನ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಮನೆ ಆವರಣದಲ್ಲಿ 'ಮಾಗಿ ಉತ್ಸವ' ನಡೆಯುತ್ತಿದೆ. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಅರಮನೆ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಸ್ಥಳೀಯರು ಮತ್ತು ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ಅರಮನೆ ಮುಂಭಾಗ ಬಲೂನ್ ಮಾರಾಟಕ್ಕೆ ಬಳಸಲಾಗುತ್ತಿದ್ದ ನೈಟ್ರೋಜನ್ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದೆ. 

 ಘಟನೆಯಲ್ಲಿ ಗಾಯಗೊಂಡ ಐವರನ್ನು ನಗರದ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.