ಅಲ್ಪಸಂಖ್ಯಾತ ಸಮುದಾಯಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಅಶ್ರಫ್ ಎಂ. ಇ. ಆಗ್ರಹ
admincoorgdaily

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಅಲ್ಪಸಂಖ್ಯಾತ ಸಮುದಾಯಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನು ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ಹಾಗೂ ಕೆಪಿಸಿಸಿ ನಾಯಕತ್ವವನ್ನು ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ಅಶ್ರಫ್ ಎಂ. ಇ. ಒತ್ತಾಯಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಹಾಗೂ ಸಂಘಟನೆ ಬಲಪಡಿಸಲು ನಿರಂತರವಾಗಿ ಕೊಡುಗೆ ನೀಡಿದೆ. ಜಿಲ್ಲೆಯ ಸಾಮಾಜಿಕ ಸಾಮರಸ್ಯ, ಸಮಾನ ಪ್ರತಿನಿಧಿತ್ವ ಹಾಗೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಈ ಬಾರಿ ಅಲ್ಪಸಂಖ್ಯಾತ ಸಮುದಾಯದ ಸಮರ್ಥ ಮತ್ತು ಪಕ್ಷನಿಷ್ಠ ನಾಯಕರಿಗೆ ಜಿಲ್ಲಾ ಅಧ್ಯಕ್ಷರ ಜವಾಬ್ದಾರಿ ನೀಡುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.