ಗೋಣಿಕೊಪ್ಪ: ನೂತನ ಬಸ್ ತಂಗುದಾಣದ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಗೋಣಿಕೊಪ್ಪ:  ನೂತನ ಬಸ್ ತಂಗುದಾಣದ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಗೋಣಿಕೊಪ್ಪ:ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಗೋಣಿಕೊಪ್ಪಲಿನ ಬಸ್ ಸ್ಟ್ಯಾಂಡ್ ನ ಕೊನೆಯ ಹಂತದ ಕಾಮಗಾರಿಯ ವೀಕ್ಷಣೆ ಹಾಗೂ ಪರಿಶೀಲನೆಯನ್ನು ನಡೆಸಿದರು. ಅಂತಿಮ ಹಂತದ ನಿರ್ಮಾಣ ಕಾಮಗಾರಿ ಚಾಲ್ತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕೊನೆ ಹಂತದ ಪರಿಶೀಲನೆಯನ್ನು ಮಾಡಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ,ಉಪಾಧ್ಯಕ್ಷರು ಮಂಜುಳ, ಸದಸ್ಯರಾದ ಆಫ್ ಜಲ್, ಸಫುರ, ಗ್ಯಾರಂಟಿ ಅನುಷ್ಠಾನ ಸದಸ್ಯರು ಕಲೀದ್,ಹಾಗೂ ಪ್ರಮುಖರು ಉಪಸ್ಥಿತರಿದ್ದರು.