ಗೋಣಿಕೊಪ್ಪ ದಸರಾ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ಮಾರ್ಗ ಬದಲಾವಣೆ
ಗೋಣಿಕೊಪ್ಪ:ದಿನಾಂಕ 02-10-2025 ರಂದು ಗೋಣಿಕೊಪ್ಪ ಕಾವೇರಿ ದಸರಾ ಸಮಿತಿಗಳ ವತಿಯಿಂದ ವಿದ್ಯುತ್ ಅಲಂಕೃತ ಮಂಟಪಗಳು ನಿಗದಿತ ಸ್ಥಳಗಳಿಂದ ರಾತ್ರಿ 7.00 ಗಂಟೆಗೆ ಹೊರಟು ನಗರದ ಮುಖ್ಯ ರಸ್ತೆಯಲ್ಲಿರುವ ಉಮಾಮಹೇಶ್ವರಿ ದೇವಾಲಯಕ್ಕೆ ತಲುಪಿ, ಅಲ್ಲಿಂದ ಒಟ್ಟಾಗಿ ಒಂದರ ಹಿಂದೆ ಒಂದರಂತೆ ಮುಖ್ಯ ರಸ್ತೆಗಾಗಿ ಬಸ್ಸು ನಿಲ್ದಾಣ ಮಾರ್ಗವಾಗಿ ಪಾಲಿಬೆಟ್ಟ ರಸ್ತೆ ಮಾರ್ಗವಾಗಿ ಆರ್.ಎಂ.ಸಿ.ವರೆಗೆ ಹೋಗಿ ಬೆಳಗಿನ ಜಾವ ಅಂದರೆ ದಿನಾಂಕ 03-10-2025 ರಂದು ಬೆಳಿಗ್ಗೆ 6.00 ಗಂಟೆ ಸಮಯಕ್ಕೆ ವಾಪಾಸ್ಸು ಅವರವರ ಸ್ಥಳಗಳಿಗೆ ತೆರಳಲಿದೆ.
ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತ್ತು ಸಾವಿರಕ್ಕೂ ಮೇಲ್ಪಟ್ಟು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಗೋಣಿಕೊಪ್ಪ ಪಟ್ಟಣದಲ್ಲಿ ವಾಹನಗಳ ಓಡಾಟ ಮತ್ತು ನಿಲುಗಡೆಯನ್ನು ನಗರದೊಳಗೆ ನಿಷೇಧಿಸಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಬೇಕಾಗಿರುತ್ತದೆ.
ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಸಂಚಾರ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ನಾಡ ಹಬ್ಬ ದಸರಾ ಉತ್ಸವ ಶಾಂತ ರೀತಿಯಿಂದ ನಡೆಯುವ ಸಲುವಾಗಿ ದಿನಾಂಕ 02-10-2025 ರಂದು ಸಂಜೆ 04.00 ಗಂಟೆಯಿಂದ ದಿನಾಂಕ 03-10-2025 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ಗೋಣಿಕೊಪ್ಪ ಪಟ್ಟಣದಲ್ಲಿ ತಾತ್ಕಾಲಿಕ ವಾಹನ ಸಂಚಾರದ ಮಾರ್ಗ ಬದಲಾವಣೆಯ ಅಧಿಸೂಚನೆ ಹೊರಡಿಸಲು ಉಲ್ಲೇಖದ ಪತ್ರದಲ್ಲಿ ಆರಕ್ಷಕ ಅಧೀಕ್ಷಕರು ಕೋರಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಗೋಣಿಕೊಪ್ಪ ಪಟ್ಟಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಿರುವ ವಿವರ:
1) ಗೋಣಿಕೊಪ್ಪಲು ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್‌ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್‌ನಿಂದ ಐಪಿ ಜಂಕ್ಷನ್‌ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
2) ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು- ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು.
3)ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು.
4)ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವಿರಾಜಪೇಟೆ-ಅಮ್ಮತ್ತಿ-ಸಿದ್ದಾಪುರ-ಪಿರಿಯಾಪಟ್ಟಣ-ಮೈಸೂರು ಮೂಲಕ ಹೋಗುವುದು.
5) ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು-ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
6 )ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು-ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
7)ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
8)ಮೈಸೂರು-ತಿತಿಮತಿ-ಗೋಣಿಕೊಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ-ಕೋಣನಕಟ್ಟೆ-ಪೊನ್ನಪ್ಪಸಂತೆ-ನಲ್ಲೂರು-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
9)ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ಗೋಣಿಕೊಪ್ಪ-ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ-ಶ್ರೀಮಂಗಲ, ಪೊನ್ನಂಪೇಟೆ, ನಲ್ಲೂರು, ಪೊನ್ನಪ್ಪಸಂತೆ, ಕೋಣನಕಟ್ಟೆ, ತಿತಿಮತಿ ಮಾರ್ಗವಾಗಿ ಸಂಚರಿಸುವುದು.
10 ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳು ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.