ಗೋಣಿಕೊಪ್ಪ:ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Dec 27, 2025 - 14:39
 0  367
ಗೋಣಿಕೊಪ್ಪ:ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ:ಇಲ್ಲಿನ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ಕಾವೇರಿ ಕಾಲೇಜು ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ನಾಡಿನಾದ್ಯಂತ ಖ್ಯಾತಿ ಹೊಂದಿರುವ ಕಾವೇರಿ ಕಾಲೇಜು , ವಿದ್ಯಾರ್ಥಿಗಳ ಭವಿಷ್ಯವನ್ನು ಹಾಗೂ ಸರ್ವತೋಮುಖ ಪ್ರಗತಿಯನ್ನು ಗುರುತಿಸುವಲ್ಲಿ ಹಾಗೂ ಅವರ ಭವಿಷ್ಯವನ್ನು ವಿನ್ಯಾಸಗೊಳಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿಯ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕ ವೃಂದದವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು ಇದು ಕೊಡಗಿನ ಏಳಿಗೆಗೂ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿಂದ ತೇರ್ಗಡೆಯಾದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳುವುದರೊಂದಿಗೆ ತಾವು ಓದಿದ ವಿದ್ಯಾಸಂಸ್ಥೆಯ ಹೆಸರಿಗೆ ಚ್ಯುತಿ ಬಾರದಂತೆ ಉತ್ತಮವಾಗಿ ಜೀವನ ಸಾಗಿಸಬೇಕು ಎಂದು ಕಿವಿಮಾತು ಹೇಳಿದರು. ಸಂಸ್ಥೆಯು ಸದಾ ವಿದ್ಯಾರ್ಥಿಗಳ ಹೇಳಿಕೆಯನ್ನು ಬಯಸುತ್ತಿದ್ದು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಹೆಸರು ಮಾಡಿದರೆ ಅದು ಸಂಸ್ಥೆಗೆ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಕಾವೇರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮಂಡೆಪಂಡ ಎಸ್ ಮುತ್ತಣ್ಣ, ಕೇಂದ್ರ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಟಿ. ಜಿ. ಸುರೇಶ್, ಮಣಿಪಾಲ್ ಎಂ ಐ ಟಿ ಕಾಲೇಜಿನ ಗಣಿತ ಶಾಸ್ತ್ರ ಪ್ರಾಧ್ಯಾಪಕಿ ಡಾ. ಶೋಭಾ. ಎಂ. ಇ, ಕೊಡಗು ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಚಿರಿಯಪಂಡ ಕೆ. ಉತ್ತಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಪಂಚಾಯಿತಿ ಅಧ್ಯಕ್ಷರು ಕುಲಚಂಡ ಪ್ರಮೋದ್ ಗಣಪತಿ, ಪ್ರಾಂಶುಪಾಲರು ಎಸ್. ಎಸ್. ಮಾದಯ್ಯ, ಅಕ್ರಮ್, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು, ವಿದ್ಯರ್ಥಿ, ವಿದ್ಯರ್ಥಿನಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0