ಗೋಣಿಕೊಪ್ಪ;ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

Jun 5, 2026 - 11:23
Jun 5, 2026 - 12:09
 0  2.2k
ಗೋಣಿಕೊಪ್ಪ;ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು
ಕಾಡಾನೆ

ಗೋಣಿಕೊಪ್ಪ;ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ನಡೆದಿದೆ.

ನವದೆಹಲಿಯಲ್ಲಿ ಭಾರತ ಸರ್ಕಾರದ Research & Analysis Wing ( RAW) ನಲ್ಲಿ ಐ.ಜಿ. ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಅವರು ಕಾಡಾನೆ ದಾಳಿಗೆ ಬಲಿಯಾದವರು.

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದ ಕಾಡಾನೆ. ಆನೆ ದಾಳಿಯಿಂದ ಓಡಿ ಹೋಗಿ ಜೀವ ಉಳಿಸಿಕೊಂಡ ಇಬ್ಬರು ಕಾಫಿ ತೋಟದ ಕಾರ್ಮಿಕರು. ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ. ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 5
Wow Wow 0