ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆ ಮಾಡಿಕೊಡಬೇಕು: ಟಿ.ಪಿ ರಮೇಶ್ ಒತ್ತಾಯ

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆ ಮಾಡಿಕೊಡಬೇಕು: ಟಿ.ಪಿ ರಮೇಶ್ ಒತ್ತಾಯ

ಮಡಿಕೇರಿ: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆ ಮಾಡಿಕೊಡಬೇಕು ಎಂದು ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮನವಿ ಮಾಡಿದರು.

ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಆಯೋಜಿಸದೆ ಸುಮಾರು ೨ ವರ್ಷಗಳು ಕಳೆದಿದೆ. ಅಲ್ಲದೇ, ಕಾರ್ಯಕ್ರಮ ಮಾಡಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಡಿಸೆಂಬರ್ ಅಂತ್ಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಲ್ಲಿ ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನ, ತಾಲೂಕು ಮಟ್ಟದ ಸಮ್ಮೇಳನ ನಡೆಸಲು ಅನುಕೂಲವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ಯುವ ಸಾಹಿತ್ಯ ಸಮ್ಮೇಳನ, ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಮ್ಮೇಳನ, ಲೇಖಕರಿಗೆ ಮತ್ತು ಬರಹಗಾರರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ, ಹಿರಿಯ ನಾಗರೀಕರಿಗೆ ಕವಿಗೋಷ್ಠಿ ನಡೆಸಲಾಗುತ್ತದೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಂದ ೨೦೨೪-೨೫ ಸಾಲಿನಲ್ಲಿ ೭೮ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಂಸ್ಥಾಪನಾ ದಿನ, ನಾಲ್ವಡಿ ಕೃಷ್ಣರಾಜ ಒಡೆಯರ್ ದಿನಾಚರಣೆ, ಸರ್.ಎಂ.ವಿಶ್ವೇಶ್ವರಯ್ಯ ದಿನಾಚರಣೆ, ಮಿರ್ಜಾ ಇಸ್ಮಾಯಿಲ್ ದಿನಾಚರಣೆ ಕಾರ್ಯಕ್ರಮದೊಂದಿಗೆ ಕನ್ನಡ ರಾಜ್ಯೋತ್ಸವ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ರೇವತಿ ರಮೇಶ್, ಎಸ್.ಐ.ಮುನೀರ್ ಅಹ್ಮದ್, ಪ್ರಮುಖರಾದ ವಾಸು ರೈ ಉಪಸ್ಥಿತರಿದ್ದರು.