Kodagu

ವಿರಾಜಪೇಟೆ ವಿವಿಧೆಡೆಗಳಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆ

admincoorgdaily

ವಿರಾಜಪೇಟೆ: ಚತುರ್ಥಿ ದಿನದಂದು ಶ್ರೀ ಗಣಪತಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಸೇವಾ ಕಾರ್ಯಕ್ರಮಗಳು ನಡೆದು ಶದ್ಧಾ ಭಕ್ತಿಯಿಂದ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ವಿರಾಜಪೇಟೆ ನಗರದ ಹೊರ ವಲಯದ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಉತ್ಸವ ಮೂರ್ತಿಯನ್ನು ಪೂಜಿಸಿ ಶ್ರದ್ಧಾ ಭಕ್ತಿಯಿಂದ ವಿಸರ್ಜನೆ ಮಾಡಲಾಯಿತು.

 ಶ್ರೀ ವಿಜಯ ವಿಘ್ನೇಶ್ವರ ಸೇವಾ ಸಮಿತಿ ಅಂಬಟ್ಟಿ ಗ್ರಾಮ ಪ್ರಥಮ ವರ್ಷದ ಗೌರಿ- ಗಣೇಶೋತ್ಸವ ಉತ್ಸವ ಆಚರಿಸಿ ಸಾಂಪ್ರದಾಯಿಕವಾಗಿ ಮೆರವಣಿಗೆಯಲ್ಲಿ ಸಾಗಿ ಸನಿಹದ ಕಿರುಹೊಳೆಯಲ್ಲಿ ವಿಸರ್ಜನೆ ಮಾಡಲಾಯಿತು.ಈ ಸಂಧರ್ಭದಲ್ಲಿ ಉತ್ಸವ ಸಮಿತಿಯ ಪಧಾದಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಶ್ರೀ ಮಾಹಾದೇವ ದೇವಾಲಯ ಬೇಟೋಳಿ ಗ್ರಾಮದ ದೇಗುಲದಲ್ಲಿ 11 ನೇ ವರ್ಷದ ಗೌರಿ-ಗಣೇಶೋತ್ಸವ ಆಚರಣೆಯು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದು ಮೂಲೆ ಅಂಗಡಿಯ ಕಿರು ಹೊಳೆಯಲ್ಲಿ ಉತ್ಸವ ಮೂರ್ತಿ ವಿಸರ್ಜನೆ ಮಾಡಲಾಯಿತು. ಸಂದರ್ಭದಲ್ಲಿ ದೇಗುಲದ ಉತ್ಸವ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

 ಶ್ರೀ ವಿನಾಯಕ ಯುವಕ ಸಂಘ ರಾಮನಗರ ಬೇಟೋಳಿ ಗ್ರಾಮದ 24 ನೇ ವರ್ಷದ ಗೌರಿ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ಮೂರು ದಿನಗಳ ಕಾಲ ಅನ್ನಸಂತರ್ಪಣೆ ಸೇರಿದಂತೆ ಪೂಜಾ ಕಾರ್ಯ ನಡೆದು ಬಳಿಕ ಮೆರವಣಿಗೆಯಲ್ಲಿ ತೆರಳಿ ಮೂಲೆ ಅಂಗಡಿ ಕಿರು ಹೊಳೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ಈ ಸಂಧರ್ಭದಲ್ಲಿ ಉತ್ಸವ ಸಮಿತಿ ಯ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

 ವಿರಾಜಪೇಟೆ ನಗರದ ದೇವಾಂಗ ಬೀದಿಯ ಶ್ರೀ ಛತ್ರಪತಿ ಶಿವಾಜಿ ಮಾಹರಾಜ್ ಗಣೇಶೋತ್ಸವ ಸಮಿತಿಯ 2 ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಿತು.ನಗರದ ಪ್ರಮುಖ ಬೀದಿಗಳಲ್ಲಿ ಶೋಭಯಾತ್ರೆ ನಡೆದು ಬಳಿಕ ಸುಂಕದಕಟ್ಟೆಯ ಪಂಪ್ ಕೆರೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ಉತ್ಸವ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು. ವರದಿ:

ವರದಿ:ಕಿಶೋರ್ ಕುಮಾರ್ ಶೆಟ್ಟಿ