ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿ ಸತೀಶ್ ಆಯ್ಕೆ
admincoorgdaily

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್‌ನ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ತೆರವಾಗಿದ್ದ ನಾಮನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.