ಹೆಚ್.ಟಿ. ವೆಂಕಟೇಶ್ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ

Apr 23, 2026 - 17:22
 0  333
ಹೆಚ್.ಟಿ. ವೆಂಕಟೇಶ್ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ

ಗೋಣಿಕೊಪ್ಪ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಟಿ. ವೆಂಕಟೇಶ್ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ ಹೊಂದಿದ್ದರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದಾರೆ.

ಇವರು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ವೃತ್ತಿ ಆರಂಭಿಸಿ ಭಾಗಮಂಡಲ, ಸುಂಟಿಕೊಪ್ಪ, ವಿರಾಜಪೇಟೆ ಗ್ರಾಮಾಂತರ, ನಾಪೋಕ್ಲು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪೊನ್ನಂಪೇಟೆ, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎ.ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಅಮ್ಮತ್ತಿ ಕರ್ಮಾಡು ಗ್ರಾಮದ ದಿ. ತಿಮ್ಮ ಹಾಗು ಸಣ್ಣಮ್ಮನವರ ಪುತ್ರರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0