ಚೇರಂಬಾಣೆಯಲ್ಲಿ ಹೆಣ್ಣು ಮಕ್ಕಳಿಗೆ ಹೆಚ್‍ಪಿವಿ ಲಸಿಕೆ ವಿತರಣೆ

Mar 25, 2026 - 17:30
 0  482
ಚೇರಂಬಾಣೆಯಲ್ಲಿ ಹೆಣ್ಣು ಮಕ್ಕಳಿಗೆ ಹೆಚ್‍ಪಿವಿ ಲಸಿಕೆ ವಿತರಣೆ

ಮಡಿಕೇರಿ, ಮಾ.25:-ಭಾರತದಲ್ಲಿ ಮಹಿಳೆಯರಲ್ಲಿ ಹರಡುತ್ತಿರುವ ಕ್ಯಾನ್ಸರ್‍ಗಳಲ್ಲಿ 2ನೇ ಅಪಾಯಕಾರಿ ಗರ್ಭಕಂಠದ ಕ್ಯಾನ್ಸರ್ ತಡೆಯಲು 14 ವರ್ಷದ ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡುವ ಕಾರ್ಯಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆಯಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಆಡಳಿತ ವೈದ್ಯಾಧಿಕಾರಿ ಡಾ.ಪಾರ್ವತಿ ಮಾತನಾಡಿ, ಅಪಾಯಕಾರಿ ಕ್ಯಾನ್ಸರ್ ನಂತಹ ಪಿಡುಗು ತೊಲಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 14 ವರ್ಷದ ಮೇಲ್ಪಟ್ಟು 15 ವರ್ಷದ ಒಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಗುರಿಯಾಗಿಸಿಕೊಂಡು ಉಚಿತವಾಗಿ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. 

ಮಕ್ಕಳ ಭವಿಷ್ಯಕ್ಕಾಗಿ ಎಲ್ಲಾ ಪೋಷಕರು ಈ ಅಭಿಯಾನದಲ್ಲಿ ಇಲಾಖೆಯೊಂದಿಗೆ ಸಹಕಾರ ನೀಡಿ, ಲಸಿಕೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಲಸಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಅತ್ಯುತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಲಸಿಕೆ ಇದಾಗಿದ್ದು ಯಾವ ರೀತಿಯ ಅಡ್ಡ ಪರಿಣಾಮ ಇರುವುದಿಲ್ಲ ಎಂದು ತಿಳಿಸಿದರು. 

ಒಂದು ಲಸಿಕೆ ಕೊಡಿಸಿ ಮಹಿಳೆಯರ ಜೀವ ಉಳಿಸಿ ಹಾಗೂ ತಾಯಂದಿರನ್ನು ಬದುಕಿಸಿ ಎಂದು ಡಾ.ಪಾರ್ವತಿ ಅವರು ಒತ್ತಿ ಹೇಳಿದರು.        

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಿಲನ ಮುತ್ತಮ್ಮ, ಬಿಂದು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಕಾರ್ತೀಕ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ಕೃತೀಕ, ಭವಾನಿ, ಚಂದ್ರಕಲಾ, ಪೂರ್ಣಿಮಾ ಹಾಗೂ ಆಶಾ ಕಾರ್ಯಕರ್ತರು ಇದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0