ಜು.29 ರಂದು ಹಡಪದ ಅಪ್ಪಣ್ಣ ಜಯಂತಿ

Jul 28, 2026 - 18:36
 0  62
ಜು.29 ರಂದು ಹಡಪದ ಅಪ್ಪಣ್ಣ ಜಯಂತಿ

ಮಡಿಕೇರಿ ಜು.28:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವು ಜುಲೈ, 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡಗು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ಕೆ.ಎಸ್.ದೊರೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಎಂ.ಟಿ.ಮಧು, ಸವಿತಾ ಸಮಾಜ ಮಹಿಳಾ ಘಟಕದ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಆರ್.ಬಿ.ವಸಂತಿ, ಉಪನ್ಯಾಸಕರು ಹಾಗೂ ಸಾಹಿತಿ ಕೆ.ಜಯಲಕ್ಷ್ಮಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0