ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ನೇಮಕ
ಮಡಿಕೇರಿ:ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಹಂಸು ಕೊಡಿ ರವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಎಸ್. ಪೊನ್ನಣ್ಣರವರು ಬೆಂಗಳೂರಿನಲ್ಲಿ ನೇಮಕಾತಿ ಆದೇಶ ಪತ್ರ ನೀಡಿ,ಅವರ ಹಂಸು ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ವಿರಾಜಪೇಟೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಹಾಗೂ ಮತ್ತಿತರರು ಇದ್ದರು.