ಹಾರಂಗಿ: ಮತ್ತೋರ್ವ ವಿದ್ಯಾರ್ಥಿಯ ಮೃತ ದೇಹ ಪತ್ತೆ
ಸುಂಟಿಕೊಪ್ಪ: ಬುಧವಾದ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ರವರ ಮೃತದೇಹ ಇಂದು ಪತ್ತೆಯಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ದುಬಾರೆ Rafting ತಂಡದವರು ಈ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲಕ್ಕೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
