ಹಾರಂಗಿ ಅಣೆಕಟ್ಟೆ ಭರ್ತಿ: 4 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
ಕುಶಾಲನಗರ: ಹಾರಂಗಿ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಹರಿಬಿಡಲಾಗಿದೆ. ವಾಡಿಕೆಯಂತೆ ಗೇಟ್‌ಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಬಳಿಕ ನೀರನ್ನು ಹೊರಬಿಡಲಾಗಿದೆ.
ಕಾವೇರಿ ಜಲಾನಯನ ವ್ಯಾಪ್ತಿಯ 4 ಪ್ರಮುಖ ಅಣೆಕಟ್ಟೆಗಳಾದ ಕಬಿನಿ, ಹೇಮಾವತಿ, ಕೆ.ಆರ್.ಎಸ್ ಮತ್ತು ಹಾರಂಗಿ ಅಣೆಕಟ್ಟೆಗಳಲ್ಲಿ ಮಳೆ ಕೊರತೆ ಇದ್ದರೂ ಪ್ರಥಮವಾಗಿ ಭರ್ತಿಯಾದ ಹಾರಂಗಿಯಿಂದ 4 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ಅಣೆಕಟ್ಟೆಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಗೇಟ್ ತೆರೆದು ನೀರು ಬಿಟ್ಟಿದ್ದಾರೆ. ನದಿ ದಂಡೆಯ ಗ್ರಾಮಗಳ ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
