ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಹರಪಳ್ಳಿ ರವೀಂದ್ರ ಕರೆ
ಕುಶಾಲನಗರ, ಜೂ.29 : ಕುಶಾಲನಗರ ತಾಲ್ಲೂಕಿನ ಕೂಡುಮಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ವತಿಯಿಂದ ಶನಿವಾರ 'ದಾನಿಗಳ ನಡಿಗೆ ಸರ್ಕಾರಿ ಶಾಲೆಯೆಡೆಗೆ' ಎಂಬ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರೂ ಆದ, ದಾನಿ ಹರಪಳ್ಳಿ ರವೀಂದ್ರ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮ, ಸತತ ಪ್ರಯತ್ನಗಳೊಂದಿಗೆ ನಿರಂತರ ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರ ತಂಡವಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಕಲಿಕೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಂಡು ಪೋಷಕರು ಮತ್ತು ಸಮಾಜದ ಋಣವನ್ನು ತೀರಿಸುವ ಮೂಲಕ ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘ- ಸಂಸ್ಥೆಗಳು ಕೈಜೋಡಿಸಬೇಕು ಎಂದರು. ಮುಂದುವರೆಯುತ್ತಾ ಅವರು, 'ತಾವು ದುಡಿದು ಗಳಿಸಿದ್ದರಲ್ಲಿ ಸ್ವಲ್ಪಭಾಗವನ್ನು ದೀನರಿಗೆ ಮತ್ತು ಬಡ ಮಕ್ಕಳ ಬಾಳಿಗೆ ನೀಡುವುದರಿಂದ ಅವರ ಬದುಕು ಹಸನಾಗುತ್ತದೆಂದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಬಿ.ಡಿ. ರಮ್ಯ, ಎಸ್.ಎಂ.ಗೀತಾ ಬಿ.ಎಸ್.ಅನ್ಸಿಲಾ ರೇಖಾ ಇತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
