ಅರಣ್ಯ ಸಚಿವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಮಾನಸಿಕ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾರೋ:ಮಾಜಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್
ಸಿದ್ದಾಪುರ: ಅರಣ್ಯ ಸಚಿವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಮಾನಸಿಕ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾರೋ ಎಂಬ ಸಂಶಯ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿಚ ಎಂ ಪಿ ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ನೆಲ್ಯಹುದಿಕೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಘಟಕ ರಚನೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು ಅರಣ್ಯ ಸಚಿವರು ಇತ್ತೀಚೆಗೆ ನೂತನ ಆದೇಶ ನೀಡಿರುವ ಪ್ರಕಾರ 1980 ರಿಂದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಾಸವಿರುವವರು ಕೂಡಲೇ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು ಇಲ್ಲದಿದ್ದರೆ ದಂಡ ವಿಧಿಸಲಾಗುವುದೆಂಬ ಆದೇಶ ನೀಡಿರುವುದು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದ್ದಾರೆ. ಬಡವರ ವಿರುದ್ದ ಅಧಿಕಾರ ದುರ್ಬಳಕೆ ಮಾಡುತ್ತಿರುವ ಸರಕಾರವನ್ನು ಕಿತ್ತೊಗೆಯಬೇಕೆಂದು ಒತ್ತಾಯಿಸಿದ್ದಾರೆ.
