ಆರೋಗ್ಯ ರಕ್ಷಾ ಸಮಿತಿ ಸಭೆ:ರೋಗಿಗಳನ್ನು ಅತ್ಯಂತ ಕಾಳಜಿಯಿಂದ ಪರೀಕ್ಷಿಸಿ,ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ: ಶಾಸಕ ಎ.ಎಸ್ ಪೊನ್ನಣ್ಣ ಸೂಚನೆ

ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಆರೋಗ್ಯ ರಕ್ಷಾ ಸಮಿತಿ ಸಭೆ, ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಚಿಕಿತ್ಸೆ ಪ್ರಯುಕ್ತ ಆಗಮಿಸುವ ಎಲ್ಲಾ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಒದಗಿಸುವಂತೆ ಹೇಳಿದ ಶಾಸಕರು ಆಸ್ಪತ್ರೆಗೆ ಬೇಕಾದ ಎಲ್ಲಾ ಅತ್ಯಗತ್ಯ ಸವಲತ್ತುಗಳು ಯಾವುದೇ ಕಾರಣಕ್ಕೂ ಇಲ್ಲ ಎಂದಾಗಬಾರದು ಎಂದು ಆದೇಶ ನೀಡಿದರು.
ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕರು, ತಮ್ಮ ಬಳಿಗೆ ಬರುವ ಎಲ್ಲಾ ರೋಗಿಗಳನ್ನು ಅತ್ಯಂತ ಕಾಳಜಿಯಿಂದ ಪರೀಕ್ಷಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡಬೇಕೆಂಬ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ರಕ್ಷಾ ಸಮಿತಿಯ ಸದಸ್ಯರು ಕುಂಡಚೀರ ಮಂಜು ದೇವಯ್ಯ, ಮಂಡೆಟೀರ ಅನಿಲ್ ಅಯ್ಯಪ್ಪ , ಸಂತೋಷ್ ಕುಮಾರ್, ಶೀಬಾ ಪೃಥ್ವಿ ನಾಥ್, ಸೈಯದ್ ಶಬೀರ್, ಅನಿತಾ, ಕಿಶೋರ್, ಅನಿತಾ ಪ್ರಸನ್ನ, ಜಿಲ್ಲಾ ಅರೋಗ್ಯ ಅಧಿಕಾರಿ, ತಾಲೂಕು ಅಧಿಕಾರಿ, ಪುರಸಭೆ ಸದಸ್ಯ ಮತೀನ್, ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.