Kodagu

ಮಡಿಕೇರಿ ನಗರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆರೋಗ್ಯ ತಪಾಸಣೆ

admincoorgdaily

ಮಡಿಕೇರಿ ನಗರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆರೋಗ್ಯ ತಪಾಸಣೆ

ಮಡಿಕೇರಿ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ತಾಲ್ಲೂಕು ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಅವರು ಮಹದೇವಪೇಟೆ, ಓಲ್ಡ್ ಆರ್ಮಿ ಕ್ಯಾಂಟೀನ್, ದಾಸವಾಳ ಬೀದಿ ಪ್ರದೇಶಗಳಲ್ಲಿ ಮನೆ-ಮನೆ ಭೇಟಿ ನೀಡಿ, ಸ್ಥಳೀಯ ಆರೋಗ್ಯ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಹಾಗೆಯೇ ರಾಜಾಸೀಟ್, ಹಳೆಯ ಮತ್ತು ಹೊಸ ಖಾಸಗಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾದ ಸಂಚಾರ ಲಸಿಕಾ ಕೇಂದ್ರಗಳ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆಯನ್ನು ಪರಿಶೀಲಿಸಿದರು. ಜನರಿಗೆ ಲಸಿಕೆ ಸೌಲಭ್ಯವನ್ನು ಸುಲಭವಾಗಿ ತಲುಪಿಸುವುದು ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಖಾತರಿಪಡಿಸುವುದಾಗಿದ್ದು, ಜೊತೆಗೆ ಕಾರ್ಯಕ್ರಮದ ಮೂಲಕ ಸ್ಥಳೀಯ ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.