ಚೇರಂಬಾಣೆ ಅಂಗನವಾಡಿ ಕೇಂದ್ರದಲ್ಲಿ ಜಂತಹುಳ ನಿವಾರಣ ಮತ್ತು ಅನೀಮಿಯ ಆರೋಗ್ಯ ತಪಾಸಣಾ ಕಾರ್ಯಕ್ರಮ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಚೇರಂಬಾಣೆ ಮತ್ತು ತೊಟ್ಟಿಲು ಕುಂಞಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಜಂತುಹುಳ ನಿವಾರಣ ಹಾಗೂ ಅನಿಮಿಯ ಅರೋಗ್ಯ ತಪಾಸಣ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ತಂಡದ ವೈದ್ಯಾಧಿಕಾರಿಗಳಾದ ಡಾ. ಪೂಜಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಶೀಲಾ ಅಶೋಕ್ ರವರು ಮಕ್ಕಳಿಗೆ ಜಂತಹುಳ ನಿವಾರಣ ಮಾತ್ರೆಗಳನ್ನು ವಿತರಿಸಿದರು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಮಾತನಾಡಿ ಪ್ರತಿ ವರ್ಷಕ್ಕೆ ಎರಡು ಬಾರಿ ಅಂಗನವಾಡಿ ಕೇಂದ್ರದಲ್ಲಿ ಜಂತಹುಳದ ಮಾತ್ರೆಯನ್ನು ಮಕ್ಕಳಿಗೆ ವಿತರಿಸಲಾಗುತ್ತಿದ್ದು ಇದರ ಸದುಪಯೋಗವನ್ನು ಫಲಾನುಭವಿಗಳು ಸಮಯಕ್ಕೆ. ಸರಿಯಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆಗಳ ಮುಖಾಂತರ 19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಹುಳದ ಮಾತ್ರೆಯನ್ನು ವಿತರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಅನಿಮಿಯ ಆರೋಗ್ಯ ತಪಾಸಣೆ ಮತ್ತು ಅರಿವು ಕಾರ್ಯಕ್ರಮ ಕೂಡ ನಡೆಸಲಾಯಿತು. ಈ ಸಂದರ್ಭ ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ತಂಡದ ವೈದ್ಯಾಧಿಕಾರಿಗಳಾದ ಕೃತಿಕಾ ಅಮೃತವಾಣಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ ಗೀತಾ,ಅಂಗನವಾಡಿ ಕಾರ್ಯಕರ್ತೆಯರಾದ ಶೈಲಾ, ರೋಹಿಣಿ, ಜಯಲಕ್ಷ್ಮಿ, ಮಕ್ಕಳ ಪೋಷಕರು ಬಾಲ ವಿಕಾಸ ಸಮಿತಿಯ ಅಧ್ಯಕ್ಷರು ಅಂಗನವಾಡಿ ಸಹಾಯಕಿಯರು, ಮಕ್ಕಳು ಹಾಜರಿದ್ದರು.
What's Your Reaction?
Like
2
Dislike
0
Love
1
Funny
0
Angry
0
Sad
0
Wow
1
