ಪುಷ್ಯ ಮಳೆಯ ಆರ್ಭಟ:ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ
ಸೋಮವಾರಪೇಟೆ: ಜಿಲ್ಲೆಯಲ್ಲಿ ಗಾಳಿ-ಮಳೆಯ ಆರ್ಭಟ ಮುಂದುವರೆದಿದ್ದು ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ಕ್ಕೆ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.