Kodagu

ಹಾರಂಗಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಅಧಿಕ ಮಳೆ: ಅಣೆಕಟ್ಟೆಯಿಂದ ನದಿಗೆ 13 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

admincoorgdaily

ಹಾರಂಗಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಅಧಿಕ ಮಳೆ: ಅಣೆಕಟ್ಟೆಯಿಂದ ನದಿಗೆ 13 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಕುಶಾಲನಗರ: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬಾರಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣವು ಹೆಚ್ಚಾದ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 13. ಸಾವಿರ ಕ್ಕೂ ಹೆಚ್ಚು ಕ್ಯೂಸೇಕ್ಸ್ ನೀರನ್ನು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಶ್ ಮಾಹಿತಿ ನೀಡಿರುತ್ತಾರೆ.

ಈಗಾಗಲೇ ಅಣೆಕಟ್ಟೆಗೆ ಒಳ ಹರಿವು 11. ಸಾವಿರದ 800, ಕ್ಯೂಸೇಕ್ಸ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾಗಿ ಬರುತ್ತಿರುವ ನೀರನ್ನು ನದಿಗೆ ಮುಖ್ಯ ಬಾಗಿಲು ಮತ್ತು ವಿದ್ಯುತ್ ಘಟಕದ ಮುಖೇನ ನದಿಗೆ ಹರಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಐ ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ. ಅಣೆಕಟ್ಟೆಯಿಂದ ಹೆಚ್ಚುವರಿಯಾಗಿ ನೀರನ್ನು ನದಿ ಹರಿಸುತ್ತಿರುವ ಹಿನ್ನೆಲೆಯಲ್ಲಿ ನದಿ ಮುಖೇನ ನದಿಗೆ ಹರಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಐ ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.