ಕೊಡಗಿನಲ್ಲಿ ಮುಂದುವರಿದ ಭಾರಿ ಗಾಳಿ-ಮಳೆ:ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದ ಮರ: ರಸ್ತೆ ಬಂದ್
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಗುರುವಾರದಿಂದ ಭಾರೀ ಗಾಳಿ-ಮಳೆಯಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿ 275 ಮೇಲೆ ಮರ ಬಿದ್ದು, ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಗಟ್ಟಿ ನಿಂತ ವಾಹನಗಳು ನಿಂತಿದ್ದ ದೃಶ್ಯ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.