ಫೆ.28ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
ಮಡಿಕೇರಿ: ಫೆ.೨೮ರಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಚೆಟ್ಟಿಮಾನಿ ಮಂಡಲ ವತಿಯಿಂದ ಪದಕಲ್ಲು ಗ್ರಾಮದಲ್ಲಿ ವಿರಾಟ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕರಾದ ಕೆದಂಬಾಡಿ ವಿವೇಕ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ ೯.೩೦ ಗಂಟೆಗೆ ಭಗವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ದೇವಾಲಯದಿಂದ ಮೆರವಣಿಗೆ ಆರಂಭವಾಗಿ ಸುಮಾರು ೧ ಕಿ.ಮೀಟರ್ ನಷ್ಟು ಶೋಭಯಾತ್ರೆ ನಡೆಯಲಿದೆ. ಮೆರವಣಿಗೆ ಸಂದರ್ಭ ಚೆಟ್ಟಿಮಾನಿ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಮುಖರಾದ ಶರತ್ ಮಾತನಾಡಿ, ಪದಕಲ್ಲು ಗ್ರಾಮದ ಆಟದ ಮೈದಾನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೌದ್ಧಿಕ್ ನಡೆಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಂಡಲ ಸಮಿತಿಯ ಪ್ರಮುಖರಾದ ಸೋಮಪ್ಪ ಪೂಜಾರಿ, ಕೆ.ಜೀವನ್, ಶರತ್ ಶೆಟ್ಟಿ, ಕೆ.ಶಿವಕುಮಾರ್ ಇದ್ದರು.