ಮನೆಯಪಂಡ ಶಿಪ್ಪ ಕಾಳಪ್ಪ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಗೋಣಿಕೊಪ್ಪ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನೆಯಪಂಡ ಶಿಪ್ಪ ಕಾಳಪ್ಪ ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಮೈಸೂರಿನಲ್ಲಿ ನಡೆದ 5ನೇಮುಕ್ತ ಕರಾಟೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇವರು ವೀರಾಜಪೇಟೆಯ ಮನೆಯ ಪಂಡ ಎನ್.ಕಾಳಪ್ಪ, ದೇಚಮ್ಮ ದಂಪತಿ ಪುತ್ರಿ. ಇವರ ಸಾಧನೆಗೆ ಪ್ರಾಂಶುಪಾಲ ಎಸ್.ಎಸ್.ಮಾದಯ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ.ಸಂತೋಷ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
