Kodagu

ಬಲ್ಲಮಾವಟಿ,ಪೇರೂರು ಗ್ರಾಮದಲ್ಲಿ ಗಾಳಿ ಮಳೆಗೆ ಹಾರಿಹೋದ ಮನೆಯ ಶೀಟ್ ಗಳು

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದಲ್ಲಿ ಸುರಿದ ಬಾರಿ ಗಾಳಿ ಮಳೆಗೆ ಗ್ರಾಮದ ನಿವಾಸಿ ಕೋಡಿಯಂಡ ತಿಮ್ಮಯ್ಯ ಎಂಬುವವರ ನಿರ್ಮಾಣ ಹಂತದಲ್ಲಿದ್ದ ವಾಸದ ಮನೆಯ ಶೀಟ್ ಗಳು ಹಾರಿಹೋಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.