ಸೆ.22 ರಿಂದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಮನೆ ಮನೆ ಸಮೀಕ್ಷೆ
admincoorgdaily
ಮಡಿಕೇರಿ:-2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮನೆ ಮನೆ ಸಮೀಕ್ಷೆಯನ್ನು ಸೆಪ್ಟೆಂಬರ್, 22 ರಿಂದ ಅಕ್ಟೋಬರ್, 07 ರವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಆಹಾರ ಚೀಟಿ, ಆಧಾರ್ ಕಾರ್ಡ್ ಸಂಖ್ಯೆ, ಮತದಾರರ ಗುರುತಿನ ಚೀಟಿ ಮತ್ತು ವಿಕಲಚೇತನರಾಗಿದ್ದಲ್ಲಿ ಯುಐಡಿ ಕೋಡ್/ಪ್ರಮಾಣ ಪತ್ರ ಈ ದಾಖಲಾತಿಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಹಾಗೂ ಪ್ರಶ್ನಾವಳಿಯಲ್ಲಿ ನಾಗರಿಕರ ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಕೌಶಲ್ಯ, ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಹಾಗೂ ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ, ಕುಲಕಸುಬು ಮುಂತಾದವುಗಳ ಬಗ್ಗೆ ಮಾಹಿತಿ ನೀಡಬೇಕಾಗಿರುವುದರಿಂದ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ಎ.ಎಸ್.ಅವರು ತಿಳಿಸಿದ್ದಾರೆ.