ಮಳೆಯ ಆರ್ಭಟಕ್ಕೆ ಕಿರುಂದಾಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಹಾನಿ
admincoorgdaily
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಬಳಿಯ ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮದ ನಿವಾಸಿ ದೇವಜನ ಪುಷ್ಪವೇಣಿ ಎಂಬುವವರ ವಾಸದ ಮನೆಯ ಒಂದು ಭಾಗದ ಗೋಡೆ ಪೂರ್ಣವಾಗಿ ಕುಸಿದು ಬಿದ್ದು ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.